ನಾಗರಾಜ ಎಸ್ ಮಡಿವಾಳರ
ಮುದಗಲ್ : ಪಟ್ಟಣದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಆಗಸ್ಟ್ 30 ರಂದು ಸರಕಾರದ ಗೃಹಲಕ್ಷ್ಮಿ ಅನುಷ್ಠಾನಕಾರ್ಯಕ್ರಮ ನಡೆಯಲಿದೆ ಎಂದು ಪುರಸಭೆ ಮುಖ್ಯಧಿಕಾರಿ ನಬಿಸಾಬ್ ಕಂದಗಲ್ ಹೇಳಿದರು.
ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು
ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ.2000/-ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೊಂದಣಿಯಾಗಿರುವ ಫಲಾನುಭವಿಗಳಿಗೆ, ಅ.30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಮುಖ್ಯ ಮಂತ್ರಿಗಳು ಲೋಕಾರ್ಪಣೆಗೊಳಿಸಲಿದ್ದು ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಸಂದೇಶ ಬರುವುದರಿಂದ ನೊಂದಾಯಿತ ಫಲಾನುಭವಿಗಳು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಕೊಂಡಿರುವ ಮೊಬೈಲ್ ಫೋನ್‌ಗಳೊಂದಿಗೆ ಕಾರ್ಯಕ್ರಮಕ್ಕೆ ಭಾಗವಹಿಸಿ, ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಎಲ್ಇಡಿ ವಾಲ್ ವ್ಯವಸ್ಥೆಗೊಳಿಸಲಾಗುಗಿದ್ದು ಕಾರ್ಯಕ್ರಮಕ್ಕೆ ಸಾರ್ವಜನಿಕರು, ಫಲಾನುಭವಿಗಳು, ಚುನಾಯಿತ ಜನ ಪ್ರತಿನಿಧಿಗಳು ಆಗಮಿಸಬೇಕೆಂದು ಪತ್ರಿಕೆಗಳ ಮೂಲಕ ವಿನಂತಿಸುತ್ತೇನೆ ಎಂದರು.