Thursday , September 19 2024
Breaking News
Home / Breaking News / ತಾವರಗೇರಾ: ಗಜಾನನ ಮೂರ್ತಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಬಾಂಧವರು..!

ತಾವರಗೇರಾ: ಗಜಾನನ ಮೂರ್ತಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಬಾಂಧವರು..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸಲ್ಮಾನ ಬಂಧುಗಳು ಪಟ್ಟಣದ ಮೇಗಳ ಪೇಟೆಯಲ್ಲಿನ ಗಣೇಶ ಹಾಗೂ ವೀರಭದ್ರೇಶ್ವರ ನಗರದ ಗಣೇಶ ಮೂರ್ತಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಹಿಂದು – ಮುಸ್ಲಿಂ ಭಾವೈಕ್ಯತೆ ಮೆರೆದದ್ದು ಕಂಡುಬಂತು.

ನಂತರ ಸಮಸ್ತ ಮುಸ್ಲಿಂ ಬಾಂಧವರು ಸ್ಥಳೀಯ ಜುಮ್ಮಾ ಮಸೀದಿ ಯಿಂದ ಮಕ್ಕಾ, ಮದಿನಾ ಸ್ತಭ್ದ ಚಿತ್ರದೊಂದಿಗೆ ಮೆರವಣಿಗೆ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಈದ್ ಮಿಲಾದ್ ಹಬ್ಬವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಕನಕದಾಸ ವೃತ್ತ, ವಾಲ್ಮೀಕಿ ವೃತ್ತ, ಭಗೀರಥ ವೃತ್ತ , ಅಂಬೇಡ್ಕರ್ ವೃತ್ತ, ಟಿಪ್ಪು ವೃತ್ತ ಗಾಂಧಿಜೀ ವೃತ್ತ ಗಳಲ್ಲಿ ಮಾಲಾರ್ಪಣೆ ಮಾಡುವ ಮೂಲಕ ಹಬ್ಬ ಆಚರಿಸಿದರು. ಹಾಗು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮುಸ್ಲಿಂ ಬಾಂಧವರಿಂದ ಹಾಲು ವಿತರಿಸಲಾಯಿತು , 

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!