Tuesday , September 17 2024
Breaking News
Home / Breaking News / ತಾವರಗೇರಾ: ಸಡಗರ ಸಂಭ್ರಮದ , ಗಣರಾಜ್ಯೋತ್ಸವ ಆಚರಣೆ..!

ತಾವರಗೇರಾ: ಸಡಗರ ಸಂಭ್ರಮದ , ಗಣರಾಜ್ಯೋತ್ಸವ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಪಟ್ಟಣದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ವಿವಿಧ ಶಾಲಾ ಕಾಲೇಜು ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿತು.

ನಂತರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಧ್ವಜಾರೋಹಣ ಸಮಾರಂಭದಲ್ಲಿ ವಿವಿಧ ಗಣ್ಯರು ಹಾಗೂ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಗಳು ಹಾಗೂ ಸದಸ್ಯರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಹಾಗೂ ಮುಖ್ಯ ಗುರುಗಳು, ದೈಹಿಕ ಶಿಕ್ಷಕರು ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡು ಧ್ವಜ ವಂದನೆ ಸಲ್ಲಿಸಿದರು.

ನಂತರ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು.


ಕನಕದಾಸ ವೃತ್ತ:– ಕನಕದಾಸರ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣರ ಹುತಾತ್ಮ ದಿನಾಚರಣೆ ಅಂಗವಾಗಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಹಾಲುಮತ ಸಮಾಜದ ಮುಖಂಡರು ಗಣರಾಜ್ಯೋತ್ಸವ ವನ್ನು ಆಚರಿಸಿದರು,
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಭಾಗವಹಿಸಿದ್ದರು..

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!