ವರದಿ ಎನ್ ಶಾಮೀದ್ ತಾವರಗೇರಾ
ಕುಷ್ಟಗಿ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಕಾಯ್ದೆಯಡಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಘಟನೆ ನಡೆದಿದೆ.
ಪೊಲೀಸ್ ಠಾಣೆ ವ್ಯಾಪ್ತಿಯ ಗೋತಗಿ ಗ್ರಾಮದಲ್ಲಿ ದಿನಾಂಕ 03-10-2020 ರಂದು ಮಧ್ಯಾಹ್ನ ಅಪ್ರಾಪ್ತ ಬಾಲಕಿ ಶಿರಗುಂಪಿ ರಸ್ತೆ ಹಳ್ಳದ ಹತ್ತಿರ ಬಹಿರ್ದೆಸೆಗೆಂದು ಹೋರಟಾಗ ದ್ವೀಚಕ್ರ ವಾಹನದಲ್ಲಿ ಬಂದ ಸಂಗಮೇಶ ಎಂಬ ವ್ಯಕ್ತಿಯು ಬಾಲಕಿಯನ್ನು ಅಪಹರಿಸಿ ಬಲವಂತದಿಂದಾಗಿ ಅತ್ಯಾಚಾರ ನಡೆಸಿದ ಹಿನ್ನೆಲೆಯಲ್ಲಿ ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು , ತನಿಖೆ ಕೈಗೊಂಡಿದ್ದ ಆಗಿನ ಸಿಪಿಐ ನಿಂಗಪ್ಪ ಎನ್ ಆರ್ ಅವರು ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಗಳು ಸಾಬೀತಾಗಿದ್ದರಿಂದ , ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು , ಈ ಕುರಿತು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತೊರಿತ ವಿಲೇವಾರಿ ನ್ಯಾಯಾಧೀಶರಾದ (ಫೊಕ್ಸೋ) ಕುಮಾರ ಡಿಕೆ ಅವರು ಆರೋಪಿ ಸಂಗಮೇಶ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಹಾಗೂ 30000 ದಂಡ ಭರಿಸುವಂತೆ ಆದೇಶಿಸಿ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು ಎಂದು ನ್ಯಾಯಾಲಯದ ಪ್ರಕಟಣೆ ತಿಳಿಸಿದೆ..