ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಶಾಲೆಯೇ ದೇವಾಲಯ ಮಕ್ಕಳೇ ದೇವರು ಎಂಬ ನಾಣ್ಣುಡಿಯಂತೆ ಇಲ್ಲಿಯ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಇದಕ್ಕೆ ವಿರುದ್ಧವಾಗಿ ರಾತ್ರಿ ವೇಳೆ ಕಾಲೇಜಿನ ಕಾರಿಡಾರ್ ಕುಡುಕರ ತಾಣವಾಗಿ ಮಾರ್ಪಟ್ಟಿರುವುದು ದುರಂತವೇ ಸರಿ.
ಈ ಬಗ್ಗೆ ಸಾರ್ವಜನಿಕರು ತಮ್ಮ ಮಕ್ಕಳು ಓದುವ ಕಾಲೇಜಿನಲ್ಲಿ ಈ ರೀತಿ ನಡೆಯುತ್ತಿರುವುದು ಅಸಯ್ಯ ಮೂಡುವಂತಾಗಿದ್ದು ತಕ್ಷಣವೇ ಸಂಭಂದಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಆಗ್ರಹಿಸಿದ್ದಾರೆ.