ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಶೌಚಾಲಯ ಕುಸಿದು ಬಿದ್ದು, ಇಬ್ಬರು ಮಹಿಳೆಯರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರ ಕುಟುಂಬಗಳಿಗೆ ತೆರಳಿ ಸಾಂತ್ವನ ಹೇಳಿದರು.
ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಧನ ವಿತರಿಸಿದ ಬಗ್ಗೆ ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಶೌಚಾಲಯ ಸಂಪೂರ್ಣವಾಗಿ ನೆಲ ಸಮಗೊಳಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಪಪಂ ಮುಖ್ಯ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪೊಲೀಸ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.