ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ:- ಪಟ್ಟಣದಲ್ಲಿ ಬೆಳಕಿನ ಹಬ್ಬ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
Video Player
00:00
00:00
ಸ್ಥಳೀಯ ಪಟ್ಟಣ ಪಂಚಾಯತ್ ಹಾಗು ವಿವಿಧ ಇಲಾಖೆ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳಲ್ಲಿ ಹಾಗೂ ಇಲಾಖೆಗಳಲ್ಲಿ ರಾಜ್ಯೋತ್ಸವವನ್ನು ಆಚರಿಸಲಾಯಿತು ಅದರಂತೆ ದೀಪಾವಳಿ ಹಬ್ಬದಂದು ಸಾರ್ವಜನಿಕರು ಶ್ರೀ ಮಹಾಲಕ್ಷ್ಮಿ ಪೂಜೆ ಶುಕ್ರವಾರದಂದು ನಡೆಸಲು ಮುಂದಾಗಿದ್ದು ಅದರಂತೆ ಹೂ ಹಣ್ಣುಗಳನ್ನು ಕೊಂಡುಕೊಳ್ಳಲು ಎಲ್ಲಾ ಕಡೆ ಜನಸಾಗರವೇ ಸೇರಿತ್ತು
Video Player
00:00
00:00
ಒಟ್ಟಾರೆ ದೀಪಾವಳಿ ಹಾಗೂ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಸೇರಿದಂತೆ ಕನ್ನಡಪರ ಸಂಘಟನೆಗಳ ಮುಖಂಡರು ವಿವಿಧ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.
ಪಟ್ಟಣದ ಶ್ರೀ ಶಾಮೀದಲಿ ವೃತ್ತದಲ್ಲಿ ಕನ್ನಡ ಸೇನೆ ಕರ್ನಾಟಕ ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟ ಸೇರಿ ರಾಜ್ಯೋತ್ಸವವನ್ನು ಆಚರಿಸಲಾಯಿತು.